ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಕ್ಷಮೆಯಾಚಿಸಿದ್ದಾರೆ.
ನಾನು ಒಬ್ಬ ಸಂಗೀತಗಾರ.
ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡಿಯೇ ಮಾಡುತ್ತೇನೆ ಎಂದು ಹೇಳಿದ್ದಾರೆ.
ಫೇಸ್ ವಿಡಿಯೋ ಮೂಲಕ ಕ್ಷಮೆಯಾಚಿಸಿರುವ ಹಂಸಲೇಖ ಅವರು, ನನಗೆ ಗೊತ್ತಿದೆ. ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು. ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ, ತಪ್ಪಾಗಿದೆ. ಅಸ್ಪ್ರಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಈ ಅನಿಷ್ಠವನ್ನು ತೊಡೆದು ಹಾಕುವುದಕ್ಕೆ ಪೇಜಾವರರಂಥ ಗುರುಹಿರಿಯರು ಅಪಾರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಬಗ್ಗೆ ನನಗೆ ಆ ಬಗ್ಗೆ ಅಪಾರ ಗೌರವವಿದೆ ಎಂದಿದ್ದಾರೆ.
ಇದನ್ನೂ ಓದಿ