ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಬೆಂಗಳೂರು ನಗರದಲ್ಲಿ ನಾಳೆ (ನ.19) ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಹಿನ್ನೆಲೆ ಬೆಂಗಳೂರು ನಗರ ದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಬೆಂಗಳೂರು ನಗರ ಡಿಸಿ ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಇನ್ನೂ ಶನಿವಾರ ರಜೆ ನೀಡುವ ಬಗ್ಗೆ ನಾಳೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ನಾನಾ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮದ ಹಿನ್ನಲೆ, ಶಾಲೆಗಳಿಗೆ ರಜೆ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ.
ಈ ಕುರಿತು ಆಯುಕ್ತ ವಿಶಾಲ್ ಆರ್ ಅವರು ಹೊರಡಿಸಿರುವ ಆದೇಶದಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗುವುದಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಆಯಾ ಜಿಲ್ಲೆಗಳ ಪರಿಸ್ಥಿತಿಯುನ್ನು ನೋಡಿಕೊಂಡು ರಜೆ ನೀಡಬೇಕು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬರದಿರುವ ಪತ್ರದಲ್ಲಿ ಹೇಳಿದ್ದಾರೆ. ಇದೇ ವೇಳೆ ಅವರು ಒಂದು ವೇಳೆ ರಜೆ ನೀಡಿದರೆ, ಮುಂದಿನ ದಿನದಲ್ಲಿ ತರಗತಿಯನ್ನು ಸರಿದೂಗಿಸಬೇಕು ಅಂತ ಕೂಡ ಸೂಚನೆ ನೀಡಿದ್ದಾರೆ.