ಬೆಂಗಳೂರು: ಭೀಕರ ಅಪಘಾತ, ಮೂವರು ಸ್ಪಾಟ್ ಔಟ್| ಇಬ್ಬರು ಗಂಭೀರ

ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

Ad Widget ... ..

ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

Ad Widget

ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಮಳೆ ಬರುತ್ತಿದ್ದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೇ ಕಾರು ಡಿವೈಡರ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *