ಮಂಡ್ಯ: ಭೀಕರ ಅಪಘಾತದಲ್ಲಿ ಐವರ ಪ್ರಾಣ ತೆಗೆದ ಜವರಾಯ

Ad Widget ... ..

ಮಂಡ್ಯ: ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೆಂಕಟೇಶ(25), ಮುತ್ತಮ್ಮ(45), ಬಸಮ್ಮಣ್ಣಿ(30) ಹಾಗೂ ಗಾಯಗೊಂಡಿದ್ದ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಲಾರಿ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಘಟಿಸಿದೆ. ಅಪಘಾತದ ತೀವ್ರತೆಗೆ ಆಟೋ ನಜ್ಜು ಗುಜ್ಜಾಗಿದೆ. ಎದುರಿನಿಂದ ಬಂದ ಲಾರಿ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅನಾಹುತ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

Leave a Comment

Your email address will not be published. Required fields are marked *