ಬಂಟ್ವಾಳ: ಮಹಿಳೆಯೋರ್ವರು ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಳಗ್ಗೆ 10 ಗಂಟೆಯ ಸುಮಾರಿಗೆ ಮಹಿಳೆಯೋರ್ವರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದನ್ನು ವಾಹನ ಸವಾರರು ನೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಷಯ ತಿಳಿದ ತಕ್ಷಣವೇ ಮುಳುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆ ಬಳಿ ಧಾವಿಸಿದ್ದು, ಮಹಿಳೆ ಅದಾಗಲೇ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನೂ ನದಿಗೆ ಹಾರಿದ ಮಹಿಳೆ ಯಾರು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಘಟನೆ ನಡೆದ ಬಳಿಕ ಕೆಲ ಹೊತ್ತು ಹೆದ್ದಾರಿಲ್ಲಿ ಸಂಚಾರಕ್ಕೆ ಅಡಚಣೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಅವರು ಟ್ರಾಫಿಕ್ ಸುಲಭ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.