ವಿಟ್ಲ: ಬೈಕ್ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಇಂದು ನಡೆದಿದೆ.
ಮೃತ ಸವಾರನನ್ನು ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ ಪ್ರಜ್ವಲ್ (26) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಎನ್ಎಂಪಿಟಿ ಉದ್ಯೋಗಿಯಾಗಿದ್ದರು. ಹಾಗಾಗಿ ಕಂಪೆನಿಗೆ ಬೈಕ್ನಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆ ಪರಿಣಾಮ ಪ್ರಜ್ವಲ್ ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.