ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ಕಾಮಪುರಾಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಅಧೀಕ್ಷಕರು ಸ್ಪಷ್ಟನೆ ನೀಡಿದ್ದಾರೆ.
ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊರ್ವ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತಂತೆ ಮಾಧ್ಯಮಗಳು ವರದಿ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಅದೀಕ್ಷಕರು ಸ್ಪಷ್ಟನೆ ನೀಡಿದ್ದಾರೆ.
ಇಂದು ಮಾದ್ಯಮಗಳಲ್ಲಿ ಡಾ. ರತ್ನಾಕರ್, ಜಿಲ್ಲಾ ಕಾರ್ಯಕ್ರಮಾಧಿಕಾರಿ ಇವರ ಕುರಿತು ವರದಿಗಳು ಪ್ರಚಾರವಾಗುತ್ತಿದ್ದು, ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು, ವೆನ್‌ಲಾಕ್ ಆಸ್ಪತ್ರೆಯ ಸಿಬ್ಬಂದಿಗಳೆಂದು ವರದಿಯಾಗುತ್ತಿದೆ.
ಸದ್ರಿ ಅಧಿಕಾರಿಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಡಿಯಲ್ಲಿ ಕಾರ್ಯನಿರ್ವಹಿಸುವ ಓರ್ವ ಜಿಲ್ಲಾ ಕಾರ್ಯಕ್ರಮಾಧಿಕಾರಿಯಾಗಿದ್ದು, ಹಾಗೂ ವರದಿಯಲ್ಲಿ ಹೇಳುತ್ತಿರುವ ಮಹಿಳಾ ಸಿಬ್ಬಂದಿಗಳು ಸದ್ರಿ ಸಿಬ್ಬಂದಿಗಳಾಗಿರುತ್ತಾರೆ.
ಅಧಿಕಾರಿಯ ಕಛೇರಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಅಧಿಕಾರಿ ಸಿಬ್ಬಂದಿಗಳಲ್ಲ.
ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದ ಸಿಬ್ಬಂದಿಗಳಾಗಿದ್ದು, ದೃಶ್ಯ ಮಾಧ್ಯಮಗಳಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳೆಂದು ತಪ್ಪು ಮಾಹಿತಿ ಪ್ರಚಾರವಾಗುತ್ತಿದ್ದು, ವರದಿಯನ್ನು ಸರಿಪಡಿಸುವಂತೆ ಮಾಧ್ಯಮಗಳಿಗೆ ಸೂಚಿಸುವಂತೆ ಕೋರಲಾಗಿದೆ ಎಂಬ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಮಾಧ್ಯಮಗಳಲ್ಲಿ ಈ ಕುರಿತು ಸ್ಪಷ್ಟೀಕರಣ ನೀಡಲು ಮನವಿ ಮಾಡಿದ್ದಾರೆ.
ಇದೂ ಓದಿರಿ