ಬೆಂಗಳೂರು: ಮೆದುಳಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಹಿರಿಯ ನಟ ಶಿವರಾಂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಹೊಸಕರೆ ಹಳ್ಳಿಗೆ ಕಾರಿನಲ್ಲಿ ಅವರು ಹೋಗಿದ್ದ ವೇಳೆ, ಈ ಘಟನೆ ಸಂಭವಿಸಿದೆ ಅನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಮೂಲಗಳ ಮಾಹಿತಿ ಪ್ರಕಾರ ಬಿದ್ದು ತಲೆಗೆ ತೀವ್ರವಾದ ಪೆಟ್ಟಾಗಿದೆ ಎಂದು ಹೇಳಲಾಗಿದೆ.
84 ವರ್ಷದ ಹಿರಿಯ ನಟ ಶಿವರಾಮ್ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಆಸ್ಪತ್ರೆ ಮೂಲಗಳ ಪ್ರಕಾರ ಅವರ ಮೆದುಳಿಗೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗಿದೆ.