Ad Widget .

ಒಮಿಕ್ರಾನ್ ಹಿನ್ನಲೆ| ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿಗೆ

ಬೆಂಗಳೂರು: ರಾಜ್ಯದ ಜನತೆ ಕರೋನ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇಂದು ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಸಿಎಂ ಈ ಬಗ್ಗೆ ಜನತೆಗೆ ಮನದಟ್ಟು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಕಂದಾಯ ಮಂತ್ರಿ ಆರ್.ಅಶೋಕ್ ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಒಮಿಕ್ರಾನ್ ತಡೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.

Ad Widget . Ad Widget . Ad Widget .

ನೂತನ ಮಾರ್ಗಸೂಚಿಯಂತೆ ಶಾಲಾ ಕಾಲೇಜುಗಳಲ್ಲಿ ಯಾವುದೇ ಸಭೆ ಸಮಾರಂಭ ಮಾಡಲು ಅವಕಾಶ ಇರುವುದಿಲ್ಲ. ಎಲ್ಲರಿಗೂ ಕಡ್ಡಾಯ ಲಸಿಕೆ ನೀಡುವುದು, ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ತಪಾಸಣೆ ಮತ್ತು ತೀವ್ರ ನಿಗಾ ಇರಿಸುವುದು ಸೇರಿದಂತೆ ಹಲವು ಕಠಿಣ ನಿಯಮಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.

ಮದುವೆ ಸಮಾರಂಭಗಳಿಗೆ 500 ಜನರಿಗೆ ಮಾತ್ರ ಅವಕಾಶ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ವ್ಯಾಕ್ಸಿನೇಷನ್ ಕಡ್ಡಾಯ, ವಿಮಾನ ನಿಲ್ದಾಣಗಳ್ಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ, 2 ಡೋಸ್ ಆಗದೆ ಮಾಲ್, ಥಿಯೇಟರ್ಗಳಿಗೆ ನೋ ಎಂಟ್ರಿ, ರಾಜ್ಯದ ಮತ್ತೆ ಕೋವಿಡ್ ಕಂಟ್ರೋಲ್ ರೂಂ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ನೈಟ್ ಕರ್ಪ್ಯೂ ಇರುವುದಿಲ್ಲ. ಪರಿಸ್ಥಿತಿ ನೋಡಿಕೊಂಡು ನಿಯಮ ಪರಿಷ್ಕರಿಸಲಾಗುವುದು. ಶಾಲಾ ಕಾಲೇಜುಗಳನ್ನು ಗಮನದಲ್ಲಿಟ್ಟುಕೊಂಡು ಆದೇಶ ಹೊರಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Leave a Comment

Your email address will not be published. Required fields are marked *