ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಮೂವರ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು.
ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ರಕ್ಷಿಸಲಾಗಿದ್ದು, ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್ ರಾವತ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ ಗೆ ದಾಖಲಿಸಲಾಗಿದೆ.
ನೀಲಗಿರಿ ಜಿಲ್ಲಾಧಿಕಾರಿ ಎಸ್ಪಿ ಅಮೃತ್ ಮತ್ತು ಜಿಲ್ಲಾಡಳಿತದ ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಅಕ್ಕಪಕ್ಕದ ಜಿಲ್ಲೆಗಳಿಂದಲೂ ವೈದ್ಯಕೀಯ ನೆರವು ತಂಡಗಳು ಬಂದಿವೆ. ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಸೂಲೂರಿನಿಂದ ವೆಲ್ಲಿಂಗ್ಟನ್ಗೆ ತೆರಳುತ್ತಿತ್ತು. ಘಟನಾ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ರಾವತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕೆಲ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ವಾಯುಪಡೆಯ Mi-17V5 ಹೆಲಿಕಾಪ್ಟರ್ನಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಅಧಿಕಾರಿಗಳಾದ ಗುರುಸೇವಕ್ ಸಿಂಗ್, ಜಿತೇಂದ್ರ ಕುಮಾರ್, ವಿವೇಕ್ ಕುಮಾರ್, ಸಾಯಿತೇಜಾ, ಸತ್ಪಾಲ್ ಅವರೊಂದಿಗೆ ಪ್ರಯಾಣಿಸುತ್ತಿದ್ದರು. ತೀವ್ರವಾಗಿ ಗಾಯಗೊಂಡಿರುವ ಬಿಪಿನ್ ರಾವತ್ ಮತ್ತು ಇತರ ನಾಲ್ವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.
ನೌಕಾಪಡೆ, ವಾಯುಪಡೆ ಮತ್ತು ಭೂಸೇನೆಯ ಸಿಬ್ಬಂದಿ ಮುಖ್ಯಸ್ಥರಾಗಿ ಜನರಲ್ ಬಿಪಿನ್ ರಾವತ್ ಅವರನ್ನು ಕೇಂದ್ರ ಸರ್ಕಾರವು ಜನವರಿ 1, 2020ರಂದು ನೇಮಿಸಿತ್ತು. ರಕ್ಷಣ ಇಲಾಖೆಯ ಭಾಗವಾಗಿ ಅಸ್ತಿತ್ವಕ್ಕೆ ಬಂದ ಮಿಲಿಟರಿ ವ್ಯವಹಾರಗಳ ವಿಭಾಗದ ಮುಖ್ಯಸ್ಥರಾಗಿಯೂ ರಾವತ್ ಸೇವೆ ಸಲ್ಲಿಸುತ್ತಿದ್ದರು. ಏಕೀಕೃತ ಕಮಾಂಡ್ಗಳ ರಚನೆ ಮತ್ತು ಸೇನೆಯ ಪುನರ್ ಸಂಘಟನೆಯ ಮಹತ್ವದ ಹೊಣೆಗಾರಿಕೆಯನ್ನು ಅವರು ನಿರ್ವಹಿಸುತ್ತಿದ್ದರು.
ಸದ್ಯ ಮೂವರನ್ನು ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.