ಕೊಚ್ಚಿ: ಕೇರಳವು ಕೊಚ್ಚಿಯಿಂದ ಒಮಿಕ್ರಾನ್ ಕೋವಿಡ್ -19 ರೂಪಾಂತರದ ಮೊದಲ ಪ್ರಕರಣವನ್ನು ವರದಿ ಮಾಡಿದೆ. ಸೋಂಕಿತ ರೋಗಿಯು ಯುಕೆಯಿಂದ ಡಿಸೆಂಬರ್ 6 ರಂದು ಕೇರಳಕ್ಕೆ ಹಿಂದಿರುಗಿದ್ದಾರೆ. ಅವರಿಗೆ ಡಿಸೆಂಬರ್ 8 ರಂದು ಕೋವಿಡ್ -19 ಟೆಸ್ಟ್ ಮಾಡಿಸಲಾಗಿದ್ದು, ಅದರ ವರದಿ ಇಂದು,ಕೇರಳದ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಮೂರನೇ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಬಂದಿದ್ದ 34 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.
ಈ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಮೂರನೇ ಪ್ರಕರಣ ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಿಂದ ಬಂದ 34 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಪ್ರಾಥಮಿಕ ಮತ್ತು 15 ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ ಮತ್ತು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಚಂಡೀಗಡ, ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದಲ್ಲೂ ತಲಾ ಒಬ್ಬೊಬ್ಬರಲ್ಲಿ ಒಮೈಕ್ರಾನ್ ಪತ್ತೆಯಾಗಿದೆ. ಈ ಮೂಲಕ ಭಾರತದಲ್ಲಿ ಒಮೈಕ್ರಾನ್ ಪೀಡಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.