ಬೆಳಗಾವಿ : ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿಗೆ ತರುತ್ತೇವೆ. ಗೋಹತ್ಯೆ ನಿಷೇಧ ತರುವುದಾಗಿ ಹೇಳಿದ್ದೇವು. ತಂದಿದ್ದೇವೆ. ಅದೇ ರೀತಿ ಮತಾಂತರ ನಿಷೇಧ ಕಾಯ್ದೆ ತರುತ್ತೇವೆ ಎಂದು ಹೇಳಿದ್ದೇವೆ. ಅದನ್ನು ಜಾರಿಗೆ ತರುತ್ತಿದ್ದೇವೆ. ಇದೀಗ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿಗೆ ತರುತ್ತೇವೆ ಎಂದರು.
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ಪಕ್ಷ ಯಾಕೆ ವಿರೋಧ ಮಾಡುತ್ತಿದೆ? ನಾವು ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದರು.