ಮಂಗಳೂರು: ಮೂವರು ಪಿಎಫ್ ಐ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಉಪ್ಪಿನಂಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿಯ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಸಿರಾಜ್ ಮಂಗಳೂರು, ಉಪ್ಪಿನಂಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಭೀಕರ ಲಾಠಿ ಪ್ರಹಾರ ಪೊಲೀಸರ ತಾರತಮ್ಯ ನೀತಿ, ಕೋಮುವಾದಿ ಮನಸ್ಥಿತಿಯು ಕರ್ನಾಟಕದ ಸೌಹಾರ್ದತೆಯ ಪರಂಪರೆಗೆ ಕಪ್ಪು ಚುಕ್ಕೆಯಾಗಿದೆ. ಹೀಗೆ ಮುಂದುವರಿದರೆ ರಾಜ್ಯದಲ್ಲಿ ಪೊಲೀಸರಿಂದಲೇ ಅವರ ನಡೆಯಿಂದಾಗಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದರು.
ಜಿಲ್ಲಾ ನಾಯಕಿ ಅಶ್ಫಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯೆ ಮುರ್ಶಿದಾ ಮಂಗಳೂರು, ನಗರ ಕಾರ್ಯದರ್ಶಿ ಹಫೀಝ್, ಗ್ರಾಮಾಂತರ ಅಧ್ಯಕ್ಷ ಅಶ್ರಫ್ ಪೊರ್ಕೊಡಿ, ಕಾರ್ಯದರ್ಶಿ ಸರ್ಫರಾಝ್, ಬಂಟ್ವಾಳ ಅಧ್ಯಕ್ಷ ಅಶ್ಫಕ್ ಉಪಸ್ಥಿತರಿದ್ದರು.