ಚಲಿಸುತ್ತಿದ್ದ ಬಸ್ಸ್ ನಲ್ಲಿ ಬೆಂಕಿ| ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅವಘಡ|

Ad Widget ... ..

ಯಲ್ಲಾಪುರ: ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಆತಂಕಗೊoಡ ಘಟನೆ ತಾಲೂಕಿನ ಜೋಡಕೆರೆ ಬಳಿ ಮುಂಜಾನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಬಸ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Ad Widget

ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ. ಮುಂಬೈ ನಿಂದ ಮಂಗಳೂರು ಕಡೆ ರಾಷ್ಟ್ರೀಯ ಹೆದ್ದಾರಿ 63 ರ ಮೂಲಕ ಬಸ್ ಸಂಚರಿಸುತ್ತಿರುವಾಗ ಈ ದುರ್ಘಟನೆ ನಡೆದಿದ್ದು, ಬಸ್ ನಲ್ಲಿ 22 ಪ್ರಯಾಣಿಕರು ಇದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದ್ದು, ಬಸ್ ಸುಟ್ಟು ಭಸ್ಮವಾಗಿದೆ. 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *