ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಶಾಲೆಯಲ್ಲಿ ಮೊಟ್ಟೆಯ ಬದಲಿಗೆ ಬಾಳೆಹಣ್ಣು ನೀಡುವುದರ ಜೊತೆಗೆ ಶೇಂಗಾಚಿಕ್ಕಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.
ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು. ಇದೀಗ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕಾಂಶ ಒಳಗೊಂಡಿರುವ ಕಾರಣಕ್ಕೆ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಮೊಟ್ಟೆ ವಿತರಣೆ ನಿಲ್ಲಿಸುವುದಿಲ್ಲ, ಆರೋಗ್ಯ ತಜ್ಞರು ಸಲಹೆ ಮೇರೆಗೆ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಮೊಟ್ಟೆ ಸೇವಿಸಿದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಹಾಗೂ ಶೇಂಗಾಚಿಕ್ಕಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಮೊಟ್ಟೆ ತಿನ್ನಲು ನಿರಾಕರಿಸಿದ ಮಕ್ಕಳಿಗೆ ಬಾಳೆಹಣ್ಣಿನ ಜೊತೆ ಶೇಂಗಾಚಿಕ್ಕಿ ನೀಡಬಹುದು ಎಂದು ಆರೋಗ್ಯ ತಜ್ಞರು ನೀಡಿದ್ದರು. ಇದೀಗ ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು ಕೊಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.