ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಹಲವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 206 ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜನವರಿ 18 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ https://recruitment.ksp.gov.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/01/2022
ವಿದ್ಯಾರ್ಹತೆ:
ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಶೇ.55 ರಷ್ಟು ಅಂಕಗಳೊಂದಿಗೆ ಕಡ್ಡಾಯವಾಗಿ ಪದವಿ ಪಡೆದಿರಬೇಕು. ಅಥವಾ ವಿಧಿ ವಿಜ್ಞಾನ ವಿಷಯದಲ್ಲಿ ಪದವಿಯಲ್ಲಿ ಶೇ. 55 ಅಂಕ ಗಳಿಸಿದ್ದು, ಒಂದು ವರ್ಷದ ಡಿಪ್ಲೋಮಾ ಪಡೆದವರು ಅರ್ಜಿ ಸಲ್ಲಿಸಬಹುದು. ಅಥವಾ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ವಿಧಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಶೇ. 55 ಅಂಕಗಳೊಂದಿಗೆ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ:
ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳ ವಯಸ್ಸು 21-35 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, SC/ST ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನೀಡಲಾಗಿದೆ.
ಉದ್ಯೋಗದ ಸ್ಥಳ:
ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ:
ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ