ರಾಮನಗರ: ಜಿಲ್ಲೆಯ ಸೋಲೂರು ಮಠದ ಸ್ವಾಮೀಜಿ ಬಸವಲಿಂಗ ಶ್ರೀಗಳು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಚಿಲುಮೆ ಮಠದ ಬಸವಲಿಂಗ ಶ್ರೀಗಳು, ಮಠದ ಆವರಣದಲ್ಲಿರುವಂತ ಮರ ಒಂದರಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀ ಸೇರಿದಂತೆ ವಿವಿಧ ಮಠದ ಶ್ರೀಗಳು ಆಗಮಿಸುತ್ತಿದ್ದಾರೆ. ಸೋಲು ಮಠದ ಬಸವಲಿಂಗ ಶ್ರೀಗಳ ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.