ಉಗ್ರರ ಜೊತೆ ನಂಟು ಆರೋಪ| ಮಾಜಿ‌ ಶಾಸಕ ಬಿ.ಎಂ ಇದಿನಬ್ಬ ಪುತ್ರನ ಮನೆ ಮೇಲೆ ಐಎನ್ಎ ದಾಳಿ|

ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆ ಮೇಲೆ ಎನ್​ಐಎ ದಾಳಿ ನಡೆಸಿದ್ದು, ಪುತ್ರ ಬಿ.ಎಂ.ಭಾಷಾ ಹಾಗೂ ಸೊಸೆ ದೀಪ್ತಿ ಆಲಿಯಾಸ್ ಮರಿಯಂರನ್ನು ವಶಕ್ಕೆ ಪಡೆದಿದ್ದಾರೆ.

Ad Widget ... ..

ಮಂಗಳೂರು ಹೊರವಲಯದ ಉಳ್ಳಾಲದ ಮಾಸ್ತಿಕಟ್ಟೆಯ ಮನೆ ಮೇಲೆ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಟೆಂಪೋ ಟ್ರಾವೆಲರ್ ವಾಹನದಲ್ಲಿ ದೀಪ್ತಿ ಆಲಿಯಾಸ್ ಮರಿಯಂರನ್ನು ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

Ad Widget

ಮಂಗಳೂರಿನ ವೆನ್​ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಅಧಿಕಾರಿಗಳು, ನಂತರ ನೇರವಾಗಿ ದೆಹಲಿಗೆ ಕರೆದುಕೊಂಡು ಹೋಗಲಿದ್ದಾರೆ.

ಉಗ್ರರ ಜೊತೆ ನಂಟಿರುವ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆಗಸ್ಟ್​ 4ರಂದು ಎನ್​ಐಎ ದಾಳಿ ನಡೆಸಿತ್ತು. ಪರಿಶೀಲನೆ ಬಳಿಕ ಬಾಷಾ ಅವರ ಕಿರಿಯ ಪುತ್ರ ಅಬ್ದುಲ್ ರೆಹಮಾನ್​ನನ್ನು ಬಂಧಿಸಲಾಗಿತ್ತು. ಈ ವೇಳೆ ಬಾಷಾರ ಮತ್ತೊಬ್ಬ ಪುತ್ರ ಅನಾಸ್ ಹಾಗೂ ಪತ್ನಿ ದೀಪ್ತಿ ಆಲಿಯಾಸ್ ಮರಿಯಂ ಮೇಲೆ ಅನುಮಾನ ಬಂದಿತ್ತು. ಆದರೆ ಮಗುವಿದ್ದ ಕಾರಣ ವಿಚಾರಣೆ ನಡೆಸಿ ಬಿಟ್ಟಿದದ್ದರು. ಇದೀಗ ಮತ್ತೆ ದಾಳಿ ನಡೆಸಿರುವ ತಂಡ ದೀಪ್ತಿ ಆಲಿಯಾಸ್ ಮರಿಯಂರನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *