ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಶಾಲೆ ಬಂದ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಜ್ಞರ ಜೊತೆಗೆ ಸಭೆ ನಡೆಸಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾದರೆ ಒಂದೆರಡು ವಾರದಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಬಂದ್ ಮಾಡುವ ಕುರಿತಂತೆ ಶಿಕ್ಷಣ ಇಲಾಖೆಯಿಂದ ಯಾವುದೇ ನಿರ್ಧಾರ ಕೈಗೊಳ್ಳಲಾಗುವುದಿಲ್ಲ. ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ತಮ್ಮ ಸಲಹೆ, ಅಭಿಪ್ರಾಯವನ್ನು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬಹುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.