Ad Widget .

ಕೊರೊನಾ ನಡುವೆಯೇ ಎಲೆಕ್ಷನ್ ಭರಾಟೆ| ಪಂಚರಾಜ್ಯ ಚುನಾವಣೆಗೆ ದಿನ ನಿಗದಿಪಡಿಸಿದ ಚುನಾವಣಾ ಆಯೋಗ|

ನವದೆಹಲಿ: ದೇಶದಲ್ಲಿ ಏರುತ್ತಿರುವ ಕೊರೊನಾ ಪ್ರಕರಣಗಳ ಆತಂಕದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಮಹತ್ವದ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಜ.8ರಂದು ಘೋಷಣೆ ಮಾಡಿದೆ. ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಉತ್ತರ ಪ್ರದೇಶ, ಉತ್ತರಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಯು ಒಟ್ಟು 690 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಉತ್ತರ ಪ್ರದೇಶದಲ್ಲಿ ಏಳೂ ಹಂತದಲ್ಲಿ ಚುನಾವಣೆ ನಡೆಯಲಿದ್ದರೆ, ಮಣಿಪುರದಲ್ಲಿ ಎರಡು ಹಂತದಲ್ಲಿ ನಡೆಯಲಿದೆ. ಉಳಿದಂತೆ ಗೋವಾ, ಪಂಜಾಬ್ ಹಾಗೂ ಉತ್ತರಾಖಂಡದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ.

Ad Widget . Ad Widget . Ad Widget .

ಒಟ್ಟು 403 ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಎಲ್ಲಾ ಏಳೂ ಹಂತದಲ್ಲಿ (ಫೆಬ್ರವರಿ 10, 14, 20, 23, 27 ಮಾರ್ಚ್ 3, 7) ಚುನಾವಣೆ ನಡೆಯಲಿದ್ದರೆ, 117 ಕ್ಷೇತ್ರಗಳಿರುವ ಪಂಜಾಬ್, 70 ಕ್ಷೇತ್ರಗಳಿರುವ ಉತ್ತರಾಖಂಡ ಹಾಗೂ 40 ಕ್ಷೇತ್ರಗಳಿರುವ ಗೋವಾದಲ್ಲಿ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ. ಈಶಾನ್ಯ ರಾಜ್ಯ ಮಣಿಪುರದ 60 ಕ್ಷೇತ್ರಗಳಿಗೆ ಫೆಬ್ರವರಿ 27 ಹಾಗೂ ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

1 thought on “ಕೊರೊನಾ ನಡುವೆಯೇ ಎಲೆಕ್ಷನ್ ಭರಾಟೆ| ಪಂಚರಾಜ್ಯ ಚುನಾವಣೆಗೆ ದಿನ ನಿಗದಿಪಡಿಸಿದ ಚುನಾವಣಾ ಆಯೋಗ|”

  1. Elections, no COVID-19, for other things covid-19, night curfew, weekend curfew. Political rally no covid. Other rallies, programs, festivals COVID-19 spreads and effects people.

Leave a Comment

Your email address will not be published. Required fields are marked *