Ad Widget .

ಹೆಚ್ಚುತ್ತಿರುವ ಕೊರೊನಾ, ಒಮಿಕ್ರಾನ್ ಪ್ರಕರಣ| ಫೆ.1 ರಿಂದ 10 ದಿನ ಕರ್ನಾಟಕದಲ್ಲಿ ಲಾಕ್ ಡೌನ್ ಅಥವಾ ಬಿಗಿ‌ಕ್ರಮ ಜಾರಿ|

Ad Widget . Ad Widget .

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 1 ರಿಂದ 10 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Ad Widget . Ad Widget .

ದಿನೇದಿನೇ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ನೈಟ್ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಫೆಬ್ರವರಿ 1 ರವರೆಗೂ ಕೊರೋನಾ ಏರುಗತಿಯಲ್ಲಿ ಸಾಗಿದರೆ, ಫೆ. 1 ರಿಂದ 10 ದಿನಗಳ ಕಾಲ ಮೊದಲ ಹಂತದಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ.

ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಹೆಚ್ಚಿನ ನಿರ್ಬಂಧ ವಿಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಕೊರೋನಾ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ ನಿರ್ಬಂಧವನ್ನು ಸಡಿಲ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದೆನಾದರೂ, ಈಗ ಪರಿಸ್ಥಿತಿ ಮೊದಲಿನಂತಿಲ್ಲ. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು. ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬೇಕಾದಂತಹ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸೋಂಕು ಭಾರೀ ಏರಿಕೆಯಾಗುತ್ತಿದ್ದು, ಪಾಸಿಟಿವಿಟಿ ದರ, ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ತೀವ್ರ ಏರಿಕೆ ಕಾಣ್ತಿದೆ. ಇನ್ನು ಕಳೆದ 10 ದಿನಗಳಲ್ಲಿ ಸುಮಾರು 8 ಸಾವಿರ ಮಕ್ಕಳಿಗೆ ಸೋಂಕು ತಗುಲಿದ್ದು, ಇವೇ ಮೊದಲಾದ ಕಾರಣದಿಂದ ಮತ್ತಷ್ಟು ಕಠಿಣ ನಿರ್ಬಂಧ ಜಾರಿ ಮಾಡುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಚೈನ್ ಬ್ರೇಕ್ ಮಾಡಲು 10 ದಿನ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ. ಆದರೆ, ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿ ಮಾಡಲ್ಲವೆಂದು ಸಚಿವ ಸುಧಾಕರ್ ಹೇಳಿದ್ದು, ಮತ್ತಷ್ಟು ಕಠಿಣ ನಿರ್ಬಂಧ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Comment

Your email address will not be published. Required fields are marked *