ಕೊಟ್ಟ ಸಾಲ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ| ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ

Ad Widget ... ..

ಶಿವಮೊಗ್ಗ: ಕೊಟ್ಟ ಸಾಲವನ್ನು ಕೇಳಿದಾಗ ಅನೈತಿಕ ಸಂಬಂಧದ ಅಪಪ್ರಚಾರ ಮಾಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬರು ತನ್ನ ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Ad Widget

ಭದ್ರಾವತಿ ತಾಲೂಕಿನ ಯಡೇಹಳ್ಳಿಯ ನಿವಾಸಿ ವೀಣಾ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡವರು. ಇವರು ಮತ್ತು ಇವರ ಪತಿ ಭದ್ರಾವತಿ ತಾಲೂಕಿನ ಅರಹತೋಳಲು ಗ್ರಾಮದ ಸಂತೋಷ್ ಹಾಗೂ ಆಶಾ ಎಂಬುವರಿಗೆ 8 ಲಕ್ಷ ರೂ. ಸಾಲ ನೀಡಿದ್ದರು. ಈ ಸಾಲ ವಾಪಸ್ ನೀಡುವಂತೆ ಕೇಳಿದ್ದಕ್ಕೆ ಆಶಾ ಹಾಗೂ ಸಂತೋಷ್ ದಂಪತಿಯು ವೀಣಾ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅಪಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ.

ಎಷ್ಟೇ ಕೇಳಿಕೊಂಡರು ಅದನ್ನೇ ಮುಂದುವರೆಸಿದ್ದರಿಂದ ಮನನೊಂದು 7 ವರ್ಷದ ಹಾಗೂ 1 ವರ್ಷದ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹಂಚಿನ ಸಿದ್ದಾಪುರ ಬಳಿಯ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೀಣಾ ಜ.13ರಂದು ತನ್ನ ತವರು ಮನೆ ಹೊಳಲ್ಕೆರೆಗೆ ಹೋಗಿ ಬರುವುದಾಗಿ ಹೊರಟ್ಟಿದ್ದು ಊರಿನ ಬಳಿ ಬಸ್ ಹತ್ತಿಕೊಂಡು ಅಲ್ಲಿಂದ ಎರಡು ಕಿ.ಮೀ ಮುಂದಿನ ಭದ್ರಾ ಕಾಲುವೆ ಬಳಿ ಇಳಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Leave a Comment

Your email address will not be published. Required fields are marked *