ಪುತ್ತೂರು: ಹಿಂದೂ-ಮುಸ್ಲಿಂ ಯುವಕರ ನಡುವೆ ಹಲ್ಲೆ| ಪೊಲೀಸರಿಂದ ಲಾಠಿ ಪ್ರಹಾರ

Ad Widget ... ..

ಪುತ್ತೂರು: ಅನ್ಯಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದು ನಂತರ ಅದು ಪರಸ್ಪರ ಹಲ್ಲೆಗೆ ತಿರುಗಿ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಲಘು ಲಾಠಿ ಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ಪುತ್ತೂರಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ತಡರಾತ್ರಿ ನಡೆದಿದೆ.

Ad Widget

ಘಟನೆಗೆ ಸಂಬಂಧಿಸಿದಂತೆ ಕೆಲ ಯುವಕರನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಗಡಿಯಾರದ ಸತ್ತಿಕಲ್ಲು ನಿವಾಸಿ ರಷ್ಪಕ್, ಪೆರ್ನೆ ನಿವಾಸಿಗಳಾದ ಹರ್ಷಿತ್, ಸತೀಶ್, ಜಗದೀಶ್ ಎನ್ನಲಾಗಿದೆ.

ಅನ್ಯಕೋಮಿನ ಯುವಕರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆದಾಗ ಪೊಲೀಸರು ಸ್ಥಳಕ್ಕಾಗಮಿಸಿ ಗುಂಪು ಚದುರಿಸಿದ್ದಾರೆ. ಈ ವೇಳೆ ಪೊಲೀಸರೊಂದಿಗೂ ಮಾತಿನ ಚಕಮಕಿ ನಡೆದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆನ್ನಲಾಗಿದೆ.

Leave a Comment

Your email address will not be published. Required fields are marked *