ಬ್ರಹ್ಮಾವರ: ರಸ್ತೆ ಅಪಘಾದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸುನೀಗಿದ್ದಾರೆ.
ಸರಿತಾ ಪಿಂಟೊ (38) ಮೃತ ಮಹಿಳೆ. ಇವರು ಸೋಮವಾರ ಕೋಟದಲ್ಲಿರುವ ತನ್ನ ತಂದೆ-ತಾಯಿ ಮನೆಗೆ ಕಳೆದ ಕೆಲವು ದಿನಗಳ ಹಿಂದೆ ಕುವೈಟ್ ನಿಂದ ಆಗಮಿಸಿದ ಪತಿ ಅನಿಲ್ ಪಿಂಟೊ ಮತ್ತು 3 ವರ್ಷದ ಮಗುವಿನೊಂದಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮಾವರದ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮಗ ಮತ್ತು ಪತಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರೆ, ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಸರಿತಾರನ್ನು ಮಣಿಪಾಲದ ಕೆಎಂಸಿ ಅಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ 2 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದರೂ ಬದುಕುಳಿಯಲಿಲ್ಲ.
ಮೃತರು ಸಹೋದರ, ತಾಯಿ, ಪತಿ,ಪುತ್ರ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.