ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಸತಾಯಿಸಿದ ಕಾರು ಚಾಲಕ| ಕಾರು ಚಾಲಕನ ಎಲ್ಲೆಡೆ ಆಕ್ರೋಶ

ಮಂಗಳೂರು: ನಗರದಿಂದ ಭಟ್ಕಳಕ್ಕೆ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಕರೆದೊಯ್ಯುತ್ತಿದ್ದ ಆಯಂಬುಲೆನ್ಸ್ ಗೆ ದಾರಿಬಿಟ್ಟು ಕೊಡದ ಚಾಲಕ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಘಟನೆ ಬುಧವಾರ ಸಂಜೆ ನಡೆದಿದೆ.

Ad Widget ... ..

ಇದೇ ಕಾರಿನ ಚಾಲಕನು ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಆಯಂಬುಲೆನ್ಸ್‌ಗೆ ಇದೇ ರೀತಿ ಕಿರುಕುಳ ನೀಡಿದ್ದಾನೆ ಎಂಬ ಆರೋಪವೂ ವ್ಯಕ್ತವಾಗಿದೆ.

Ad Widget

ಈ ಮಧ್ಯೆ ಕಾರು ಚಾಲಕನ ಹುಚ್ಚಾಟಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ರೋಗಿಯನ್ನು ಬುಧವಾರ ಸಂಜೆ ಭಟ್ಕಳಕ್ಕೆ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸೇರಿ ಸಲು ಆಯಂಬುಲೆನ್ಸ್‌ನಲ್ಲಿ ಕರೆದೊಯ್ಯುಲಾಗುತ್ತಿತ್ತು. ಈ ಆಯಂಬುಲೆನ್ಸನ್ನು ಬೆಳ್ತಂಗಡಿ ಮೂಲಕ ಅಯ್ಯೂಬ್ ಚಲಾಯಿಸುತ್ತಿದ್ದರು.

ಮಂಗಳೂರಿನಿಂದ ಹೊರಟ ಆಯಂಬುಲೆನ್ಸ್ ಮುಲ್ಕಿ ತಲುಪಿದಾಗ ಚೆವರ್ಲೋ ಬೀಟ್ ಕಾರು ಓವರ್‌ಟೇಕ್ ಮಾಡಿತು. ಆ ಬಳಿಕ ಎಲ್ಲೂ ಸೈಡ್ ಬಿಟ್ಟುಕೊಡದೆ ಉಡುಪಿಯವರೆಗೂ ಕಾರು ಚಾಲಕ ಹುಚ್ಚಾಟ ಮೆರೆದ ಎನ್ನಲಾಗಿದೆ. ಇದನ್ನು ಆಯಂಬುಲೆನ್ಸ್‌ನಲ್ಲಿದ್ದವರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಕಾರು ಚಾಲಕನ ಈ ಹುಚ್ಚಾಟದ ವಿರುದ್ಧ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ.

ಸುಮಾರು 30 ಕಿ.ಮೀ.ವರೆಗೂ ಕಾರು ಚಾಲಕನು ರಸ್ತೆ ಬಿಟ್ಟುಕೊಡದೆ ತೊಂದರೆ ನೀಡಿದ್ದಾರೆ. ಕಾರಿನಲ್ಲಿ ಇನ್ನೂ ಒಬ್ಬನಿದ್ದ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *