ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ಮಾಡಲಾಗಿತ್ತು.
ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ರಜೆ ಮಾಡುವಂತೆ ತಿಳಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದಿನಾಂಕ 04-01-2022ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯವಹಿಸುವಂತೆ ಸೂಚಿಸಲಾಗಿತ್ತು. ಆದರೆ ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.