ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ತಣ್ಣಗಾಗುವ ಲಕ್ಷಣ ಕಂಡು ಬರುತ್ತಿಲ್ಲ. ವಿಧ್ಯಾರ್ಥಿನಿಯರ ಹಿತ ದೃಷ್ಠಿಯಿಂದ ಅನ್ ಲೈನ್ ಕ್ಲಾಸ್ ತೆಗೆದುಕೊಳ್ಳಲು ಸರಕಾರ ಸೂಚಿಸಿದರು, ಇದೀಗ ವಿಧ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಮೂಲಕ ಮತ್ತೆ ವಿದ್ಯಾರ್ಥಿಗಳ ಜೊತೆ ನಮ್ಮನ್ನು ತಾರತಮ್ಯ ಮಾಡಬೇಡಿ. ನಾವು ಆನ್‍ಲೈನ್ ಕ್ಲಾಸ್ ಅಟೆಂಡ್ ಆಗುವುದಿಲ್ಲ ಎಂದು ಹಿಜಬ್ ಬಗ್ಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿರುವ ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ಹೇಳಿದ್ದಾರೆ.
ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್ ಹಾಕಿಯೇ ಕಾಲೇಜಿಗೆ ಹೋಗುತ್ತೇವೆ. ಸರ್ಕಾರಿ ಕಾಲೇಜಿನಲ್ಲಿ ನಮಗೆ ನಮ್ಮ ಹಕ್ಕು ಸಿಗದಿದ್ದರೆ ನಾವು ಬೇರೆಡೆ ಅದನ್ನು ನಿರೀಕ್ಷಿಸಲು ಸಾಧ್ಯವೇ?. ಸೈನ್ಸ್ ವಿದ್ಯಾರ್ಥಿಗಳು ಇರೋದ್ರಿಂದ ನಮಗೆ ಆನ್‍ಲೈನ್ ಕ್ಲಾಸ್‍ನಲ್ಲಿ ಲ್ಯಾಬ್ ಅಟೆಂಡ್ ಮಾಡಲು ಆಗುವುದಿಲ್ಲ.
ಕಾಲೇಜಿನ ಉಳಿದ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಬ್ ಧರಿಸಲು ಸಿದ್ಧರಿದ್ದಾರೆ. ನಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದಿಂದ ಅವರು ಭಯ ಗೊಂಡಿದ್ದಾರೆ. ಸರ್ಕಾರಿ ಕಾಲೇಜ್ ಆಗಿರುವುದರಿಂದ ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ ಎಂದಿದ್ದಾರೆ.