ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad Widget ... ..

ಬಿ ಎಸ್ ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

ಸೌಂದರ್ಯ ಅವರು ಎಂ.ಎಸ್.‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೊಮ್ಮಗಳು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಬಿಎಸ್​​ ಯಡಿಯೂರಪ್ಪ ಮತ್ತು ಸಿಎಂ ಸೇರಿದಂತೆ ಅನೇಕ ಬಿಜೆಪಿ ಶಾಸಕರು ಇದೀಗ ಬೌರಿಂಗ್​ ಆಸ್ಪತ್ರೆಗೆ ತೆರಳಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದೀಗ ಮೃತ ಸೌಂದರ್ಯ ಅವರ ಕರೆಗಳನ್ನು ಸಂಗ್ರಹಿಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆಗೆ ಮುಂದಾಗಿದ್ದಾರೆ.

Leave a Comment

Your email address will not be published. Required fields are marked *