ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಉಪನಾಯಕರಾಗಿ ಯು.ಟಿ ಖಾದರ್ ನೇಮಕ

ಸಮಗ್ರ ನ್ಯೂಸ್ ಡೆಸ್ಕ್: ಕಾಂಗ್ರೆಸ್ ಹಿರಿಯ ನಾಯಕ ಯುಟಿ ಖಾದರ್ ಅವರನ್ನು ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.

Ad Widget ... ..

ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕ ಸ್ಥಾನ ಮುಸ್ಲಿಂ ಸಮುದಾಯದ ನಾಯಕನಿಗೆ ತಪ್ಪಿದ ಹಿನ್ನೆಲೆ ವಿಧಾನ ಸಭೆಯಲ್ಲಿ ವಿಪಕ್ಷ ಉಪನಾಯಕನ ಸ್ಥಾನ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ ಎಂದು ತಿಳಿದುಬಂದಿದೆ.

Ad Widget

ಯು.ಟಿ ಖಾದರ್ ಮಂಗಳೂರು ಕ್ಷೇತ್ರದ ಶಾಸಕರಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದಿರುವ ಏಕೈಕ ಕಾಂಗ್ರೆಸ್ ಪ್ರತಿನಿಧಿ ಖಾದರ್. ಈ ಅವಧಿಯಲ್ಲಿನ ಕಾಂಗ್ರೆಸ್ ಸರ್ಕಾರದಲ್ಲಿ (2018-19) ಖಾದರ್ ಅವರು ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

Leave a Comment

Your email address will not be published. Required fields are marked *