ಸಮಗ್ರ ನ್ಯೂಸ್ ಡೆಸ್ಕ್: ಕೊರೋನಾ ಸೋಂಕಿನಿಂದಾಗಿ 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ `ಪೂರ್ಣ ಕ್ಯಾರಿ ಓವರ್’ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4 ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಕೊಡುವ ಪದ್ಧತಿ ಇದೆ. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಿದ್ದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತಕ ಶೈಕ್ಷಣಿಕ ವರ್ಷಕ್ಕೆ
ಪೂರ್ಣ ಕ್ಯಾರಿ ಓವರ್’ಗೆ ಅವಕಾಶ ಕೊಡಲಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ’ ಎಂದು ಹೇಳಿದ್ದಾರೆ.