ಸಮಗ್ರ ನ್ಯೂಸ್ ಡೆಸ್ಕ್ : ಭಾರೀ ಚರ್ಚೆಗೆ ಕಾರಣವಾದ ಹಿಜಾಬ್ ವಿವಾದ ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿನಿಯೊಬ್ವಳು ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ ಆಗಿದೆ. ಆದರೆ ಹಿಜಾಬ್ ಧರಿಸಲು ಕಾಲೇಜು ಅನುಮತಿ ನೀಡಿಲ್ಲ, ಆದ್ದರಿಂದ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಹಿಜಾಬ್ ಧರಿಸುವಿಕೆ ವಿಚಾರ ಬಹಳ ಚರ್ಚೆಯಾಗುತ್ತಿದ್ದು, ಹಲವು ತಿರುವು ಪಡೆದುಕೊಳ್ಳುತ್ತಿದೆ. ಹಿಜಾಬ್ ವಿಚಾರ ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.