“ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಿ”

Ad Widget ... ..

ಪ್ರತ್ಯೇಕತೆ ಬೇಕು ಅಂದ್ರೆ ಪಾಕಿಸ್ತಾನಕ್ಕೆ ಹೋಗಿ: ಮುತಾಲಿಕ್‌

Ad Widget

ಹುಬ್ಬಳ್ಳಿ: ಉಡುಪಿ ಕಾಲೇಜಿನಲ್ಲಿ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಮನೆಗೆ ಕಳಿಸಬೇಕು ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ‌ ಕಾಲೇಜ್​ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು ಚರ್ಚೆಯ ವಿಷಯವೇ ಅಲ್ಲ. ಎಲ್ಲರೂ ಸಮವಸ್ತ್ರ ಹಾಕಿಕೊಳ್ಳಬೇಕು. ಅದರಲ್ಲಿ ಯಾವುದೇ ಜಾತಿ ಇರಲ್ಲ. ಈ ರೀತಿಯ ಭಂಡತನ ಭಯೋತ್ಪಾದನೆಗೆ ತೆಗೆದುಕೊಂಡು ಹೋಗುತ್ತದೆ ಎಂದು ಕಿಡಿಕಾರಿದರು.

ಇದು ಶಾಲೆಯೋ ಅಥವಾ ಧಾರ್ಮಿಕ ಕೇಂದ್ರವೋ. ನಿಮ್ಮ ಸ್ವತಂತ್ರ ಕೇವಲ ನಿಮ್ಮ ಮನೆಯಲ್ಲಿ ಇರಲಿ. ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಬೇಕು. ಪ್ರತ್ಯೇಕತೆ ಬೇಕು ಅಂದ್ರೆ ಪಾಕಿಸ್ತಾನಕ್ಕೆ ಹೋಗಿ. ಸರ್ಕಾರ ಇದಕ್ಕೆ ಅವಕಾಶ ನೀಡಬಾರದು ಎಂದರು.

Leave a Comment

Your email address will not be published. Required fields are marked *