ಸುಳ್ಯ: ಹೊಳೆಯಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯ ಸಮೀಪದ ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.

Ad Widget ... ..

ಆಂಧ್ರ ಮೂಲದ ಕುಟುಂಬಸ್ಥರು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರು.

Ad Widget

ಇಂದು ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದ ಸಂದರ್ಭದಲ್ಲಿ ಸ್ನಾನ ಮಾಡುತ್ತಿದ್ದ ಆರು ವರ್ಷದ ಮಗು ಕುಪ್ಪರಾ ಕಾಣೆಯಾಗಿದ್ದು, ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಅಲ್ಲೇ ಪಕ್ಕದಲ್ಲಿ ಆತನ ಮೃತದೇಹ ಲಭಿಸಿದೆ ಎಂದು ತಿಳಿದುಬಂದಿದೆ.
ನದಿ ಬದಿಯಲ್ಲಿ ಕಿರುಚಾಟ ಕೇಳಿದ ಸ್ಥಳೀಯರು ಹೋಗಿ ವಿಚಾರಿಸಿದಾಗ ನಡೆದ ಘಟನೆ ತಿಳಿದು ಬಂದಿದೆ.

Leave a Comment

Your email address will not be published. Required fields are marked *