Ad Widget .

ಗೋ ಕಳ್ಳರ ವಿರುದ್ಧ ಕಠಿಣ ಕ್ರಮ: ಸಂಸದ ನಳಿನ್ ಕುಮಾರ್ ಕಟೀಲ್

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಗೋ ಕಳ್ಳತನ ಮತ್ತು ಗೋ ಸಾಗಾಟದ ವಿರುದ್ಧ ಪೊಲೀಸ ಇಲಾಖೆಯವರು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಹೇಳಿದರು.

Ad Widget . Ad Widget .

ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಫೆ.5ರ ಶನಿವಾರ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಯಾತ್ಮಕ ಯುವ ಸಚಿವರಾದ ಸುನಿಲ್ ಕುಮಾರ್ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರ ಉಸ್ತುವಾರಿಯಲ್ಲಿ ಈಗಾಗಲೇ ಇಲಾಖೆಯಲ್ಲಿ ಹಲವಾರು ಪರಿವರ್ತನೆ ಹಾಗೂ ಸುಧಾರಣೆಯನ್ನು ತಂದಿದ್ದಾರೆ ಎಂದರು.

ಇಂಧನ ಹಾಗೂ ಸಂಸ್ಕøತಿ ಸಚಿವಾಲಯದಲ್ಲಿಯೂ ಕೂಡ ಅವರು ಕಾರ್ಯತತ್ಪರತೆಯನ್ನು ಜನತೆಗೆ ತೋರಿಸಿದ್ದಾರೆ. ಹಿರಿಯರ ಕನಸನ್ನು ನನಸು ಮಾಡಿದ್ದಾರೆ ಈ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮುನ್ನಡೆಸುವಂತಹ ಸಾಮರಸ್ಯದ ಮುಖಾಂತರ ಈ ಕ್ಷೇತ್ರವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ ಪರಿವರ್ತನೆ ಮಾಡುವ ಶಕ್ತಿ ಅವರಿಗೆ ಇದೆ ಎಂದು ಹೇಳಿದರು.

ಇಂಧನ ಮತ್ತು ಕನ್ನಡ ಹಾಗೂ ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಮಾತನಾಡಿ ಜಿಲ್ಲೆಯ ಸಂಪೂರ್ಣ ಅಭಿವೃದ್ದಿಯ ಹೊಣೆ ನನ್ನ ಮೇಲಿದೆ ಈ ಜವಾಬ್ದಾರಿಯನ್ನು ಯಶಸ್ತಿಯಾಗಿ ನಿರ್ವಹಿಸಲು ಪ್ರಾಯತ್ನವನ್ನು ಮಾಡುತ್ತೇನೆ ಎಂದರು.

ಜಿಲ್ಲೆಗೆ ಬೇಕಾದ ಎಲ್ಲಾ ರೀತಿಯ ಸವಲತ್ತುಗಳನ್ನು ಒದಗಿಸುವ ಕರ್ತವ್ಯ ನನ್ನದು ಇದರೊಂದಿಗೆ ಜಿಲ್ಲೆಯನ್ನು ಒಂದು ಉತ್ತಮ ಜಿಲ್ಲೆಯನ್ನಾಗಿಸುವಲ್ಲಿ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಶಾಸಕರುಗಳಾದ ವೇದವ್ಯಾಸ ಕಾಮತ್, ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *