ಸಮಗ್ರ ನ್ಯೂಸ್ ಡೆಸ್ಕ್: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ ಫೆ. 09 ರಿಂದ 26 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರವನ್ನು ಆಯೋಜಿಸಲಾಗಿದೆ.
ಲೇಡಿಗೋಷನ್ ಆಸ್ಪತ್ರೆಯ ವೈದ್ಯ ಡಾ. ದುರ್ಗಾಪ್ರಸಾದ್ ಹಾಗೂ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಡಾ. ನವೀನ್ ಅವರು ಫೆ.09ರ ಬುಧವಾರ ಮಂಗಳೂರು ಲೇಡಿಗೋಶನ್ ಆಸ್ಪತ್ರೆ, ಫೆ.19ರಂದು ತಾಲೂಕು ಆಸ್ಪತ್ರೆ ಬೆಳ್ತಂಗಡಿ, ಫೆ.22ರಂದು ಬಂಟ್ವಾಳ ತಾಲೂಕು ಆಸ್ಪತ್ರೆ, ಫೆ.23ರಂದು ಮಂಗಳೂರು ತಾಲೂಕಿನ ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರ, ಫೆ.25ರಂದು ಪುತ್ತೂರು ತಾಲೂಕು ಆಸ್ಪತ್ರೆ ಮತ್ತು ಫೆ.26 ರಂದು ಸುಳ್ಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸೆಯನ್ನು ನಡೆಸುವರು.
ಸಾರ್ವಜನಿಕರು ಈ ಶಿಬಿರವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ