ಸಮಗ್ರ ಕ್ರೈಂ ಡೆಸ್ಕ್: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ಬಂಟ್ವಾಳದ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ.
ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(70) ಮೃತಪಟ್ಟವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.