ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ಸಂಘರ್ಷಕ್ಕೆ ಕಾರಣವಾಗಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತಂತೆ, ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಸುಪ್ರೀಂ ಕೋರ್ಟ್ ಹಿಜಾಬ್ ವಿವಾದದ ಬಗ್ಗೆ ಮಧ್ಯ ಪ್ರವೇಶಿಸಲ್ಲ ಎಂದಿದೆ.
ಈ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ಖ್ಯಾತ ವಕೀಲ ಕಪಿಲ್ ಸಿಬಲ್ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್ ವಿ ರಮಣ ಅವರನ್ನೊಳಗೊಂಡಂತ ನ್ಯಾಯಪೀಠವು, ಮೊದಲು ಕರ್ನಾಟಕ ಹೈಕೋರ್ಟ್ ವಿಚಾರಣೆಯ ತೀರ್ಪು ಬರಲಿ. ಆನಂತರ ನೋಡೋಣ. ಈ ಸದ್ಯಕ್ಕೆ ಮದ್ಯಪ್ರವೇಶಿಸಲು ಆಗುವುದಿಲ್ಲ ಎಂಬುದಾಗಿ ತಿಳಿಸಿದೆ.
ಇಂದು(ಪೆ.10) ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡಂತ ತ್ರಿ ಸದಸ್ಯ ನ್ಯಾಯಪೀಠದಲ್ಲಿ ಮಧ್ಯಾಹ್ನ 2.30ಕ್ಕೆ ಹಿಜಾಬ್ ಅನುಮತಿ ಕೋರಿದಂತ ಅರ್ಜಿಯ ವಿಚಾರಣೆ ನಡೆಯಲಿದೆ.