Ad Widget .

ಹಿಜಾಬ್ ವಿವಾದ; “ಪಾ(ಪಿ)ಕಿ”ಸ್ತಾನದಿಂದ ಭಾರತಕ್ಕೆ ಸಮನ್ಸ್!!| ರಾಜತಾಂತ್ರಿಕ ಅಧಿಕಾರಿಗಳಿಗೆ ತಕರಾರು

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನವು, ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯದಲ್ಲಿ ಸಮನ್ಸ್ ಜಾರಿಗೊಳಿಸಿದೆ. ಭಾರತದಲ್ಲಿ ಮುಸ್ಲಿಮರ ವಿರುದ್ಧ ಧಾರ್ಮಿಕ ಅಸಹಿಷ್ಣುತೆ, ತಾರತಮ್ಯ ಹಾಗೂ ನಕಾರಾತ್ಮಕ ನಿಲುವುಗಳನ್ನು ತೆಗೆದುಕೊಳ್ಳಲಾಗುತ್ತಿದೆ.

Ad Widget . Ad Widget . Ad Widget .

ಈ ಬಗ್ಗೆ ಪಾಕಿಸ್ತಾನ ಗಂಭೀರವಾಗಿ ಕಳವಳ ವ್ಯಕ್ತಪಡಿಸುತ್ತದೆ ಎಂದು ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಅಲ್ಲಿನ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಭಾರತ ಸರ್ಕಾರವು, ಮುಸ್ಲಿಂ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಲು, ಕರ್ನಾಟಕದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಗಂಭೀರ ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಒತ್ತಾಯಿಸಿದೆ.

ಇದಕ್ಕೂ ಮುನ್ನ, ‘ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವುದು ಮೂಲಭೂತ ಮಾನವ ಹಕ್ಕುಗಳ ಘೋರ ಉಲ್ಲಂಘನೆಯಾಗಿದೆ. ಯಾರಿಗಾದರೂ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಹಿಜಾಬ್ ಧರಿಸಿದ್ದಕ್ಕಾಗಿ ಅವರನ್ನು ಬೆದರಿಸುವುದು ಸಂಪೂರ್ಣವಾಗಿ ದಬ್ಬಾಳಿಕೆಯಾಗಿದೆ’ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಟ್ವಿಟರ್‌ನಲ್ಲಿ ಟೀಕಿಸಿದ್ದರು.

Leave a Comment

Your email address will not be published. Required fields are marked *