ಸಮಗ್ರ ನ್ಯೂಸ್ ಡೆಸ್ಕ್: ವಿಧಾನ ಪರಿಷತ್ ಸಭಾ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ನಾಮ ನಿರ್ದೇಶನ ಮಾಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹಿಂದೆಯೂ ಸಭಾನಾಯಕನಾಗಿ ನೇಮಕಗೊಂಡಿದ್ದರು. ಈ ಬಾರಿಯೂ ಸಭಾ ನಾಯಕರಾಗಿ ನಾಮನಿರ್ದೇಶನ ಮಾಡಿ ಸಭಾಪತಿಗೆ ಪತ್ರ ಬರೆಯಲಾಗಿದೆ.
ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಪರಿಷತ್ನ ಸಭಾ ನಾಯಕರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಹಿಂದೆ ಯಡಿಯೂರಪ್ಪ ಸರ್ಕಾರದಲ್ಲೂ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ನ ಸಭಾನಾಯಕರಾಗಿದ್ದರು.