Ad Widget .

ಸುಳ್ಯ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪಿಗೆ ಜಾಮೀನು

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಅಪ್ರಾಪ್ತೆಯ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿ ಬಂಧಿತನಾಗಿದ್ದ ಯುವಕನಿಗೆ ಫೆ.14 ರಂದು ಪುತ್ತೂರು ಐದನೇ ಹೆಚ್ಚುವರಿ ಸೆಶನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Ad Widget . Ad Widget . Ad Widget .

ಪ್ರಕರಣದ ಆರೋಪಿಯನ್ನು ಪೆರಾಜೆ ಗ್ರಾಮದ ದೀಕ್ಷಿತ್ ಎಂದು ಗುರುತಿಸಲಾಗಿದೆ. ಈತ ಜ. 31 ರಂದು ಬೆಳ್ಳಾರೆ ಗ್ರಾಮದ ಪೆರುವಾಜೆ ಯ 15 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ಬಾಲಕಿಯ ತಾಯಿಯ ದೂರಿನ ಮೇರೆಗೆ ಆರೋಪಿಯ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯಿದೆ ಅಡಿ ಪ್ರಕರಣವು ದಾಖಲಾಗಿದ್ದು, ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ಪುತ್ತೂರು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿತ್ತು.

ಈ ಮದ್ಯೆ ಆರೋಪಿಯ ಬಿಡುಗಡೆಗಾಗಿ ಪುತ್ತೂರು ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ದೀಕ್ಷಿತ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಇಂದು ಬಿಡುಗಡೆಗೊಳಿಸಿದೆ.

ಆರೋಪಿಯ ಪರವಾಗಿ ಸುಳ್ಯದ ನ್ಯಾಯವಾದಿಗಳಾದ ಎಂ.ವೆಂಕಪ್ಪ ಗೌಡ, ಚಂಪ ವಿ ಗೌಡ ಹಾಗೂ ರಾಜೇಶ್ ಬಿ.ಜಿ ವಾದಿಸಿದ್ದರು..

Leave a Comment

Your email address will not be published. Required fields are marked *