ಸಮಗ್ರ ನ್ಯೂಸ್ ಡೆಸ್ಕ್: ‘ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಊರಿಗೆ ಮನುಷ್ಯನಲ್ಲ ಸ್ಮಶಾನಕ್ಕೆ ಹೆಣವೂ ಅಲ್ಲ ಎನ್ನುವಂತಾಗಿದೆ’ ಎಂದು ಕಂದಾಯ ಸಚಿವ ಆರ್ ಅಶೋಕ್ ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿಧಾನಸಭಾ ಅಧಿವೇಶನದಲ್ಲಿ ಹಿಜಾಬ್ ವಿಚಾರ ಯಾಕೆ ಚರ್ಚೆ ಮಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಹಿಜಾಬ್ ಪರವಾಗಿ ಇದೆ ಎಂದು ಹೇಳಲು ಡಿ.ಕೆ.ಶಿವಕುಮಾರ್ ಬಿಡುತ್ತಿಲ್ಲ. ನಾವು ಹಿಂದೂ ಪರವಾಗಿದ್ದೇವೆ ಎಂದು ಹೇಳಲು ಸಿದ್ದರಾಮಯ್ಯ ಬಿಡುತ್ತಿಲ್ಲ. ಇದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಫೈಟ್ ಅಷ್ಟೇ. ವಿಧಾನಸಭೆಯಲ್ಲಿ ಹಿಜಾಬ್ ಕೇಸರಿ ಶಾಲು ವಿವಾದದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಸಚಿವ ಆರ್ ಅಶೋಕ್ ಪ್ರಶ್ನೆ ಮಾಡಿದರು.
ವಿಧಾನಸಭಾ ಅಧಿವೇಶದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಈಶ್ವರಪ್ಪ ರಾಷ್ಟ್ರದ ಸಾರ್ವಭೌಮತ್ವದ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬುದು ಕಾಂಗ್ರೆಸ್ ಆರೋಪವಾಗಿದ್ದು, ಅದನ್ನು ಕಂದಾಯ ಸಚಿವ ಆರ್ ಅಶೋಕ್ ತಳ್ಳಿ ಹಾಕಿದ್ದಾರೆ.