ಸಮಗ್ರ ನ್ಯೂಸ್: ಎಫ್.ಎಂ. ಕೇಳುಗರ ಪ್ರೀತಿಯ ಆರ್.ಜೆ., ನಟಿ ರಚನಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರೇಡಿಯೋ ಜಾಕಿಯಾಗಿ ರಚನಾ ರೇಡಿಯೋ ಮಿರ್ಚಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಮುದ್ದಾದ ಮಾತಿನ ಮೂಲಕ ಅನೇಕ ಕೇಳುಗರನ್ನು ಸೆರೆಹಿಡಿದಿದ್ದರು. ಹೀಗೆ ಕೆಲಸ ಮಾಡಿ ಕೆಲಸ ಬಿಟ್ಟು ಮನೆಯಲ್ಲಿದ್ದಂತ ಅವರು ಡಿಪ್ರೆಷನ್ ಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಮಾನಸಿಕ ಒತ್ತಡಕ್ಕೆ ಒಳಗಾದ ಕಾರಣ, ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಜೆ.ಪಿ.ನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಖ್ಯಾತ ರೆಡಿಯೋ ಜಾಕಿ ರಚನಾ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ರೆಡಿಯೋ ಸಿಟಿ, ರೇಡಿಯೋ ಮಿರ್ಚಿ ಮುಂತಾದ ಎಫ್ ಎಂಗಳಲ್ಲಿ ಆರ್.ಜೆ. ಆಗಿ ಕೆಲಸ ಮಾಡಿದ್ದ ರಚನಾ, ರಕ್ಷಿತ್ ಶೆಟ್ಟಿ ಅಭಿನಯದ ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಚಿತ್ರದಲ್ಲಿ ಕೂಡ ಅಭಿನಯಿಸಿದ್ದರು.