Ad Widget .

ಬಂಟ್ವಾಳ: ಗಂಡ-ಹೆಂಡತಿ ಮಧ್ಯೆ ವೈಮನಸ್ಸು| ಬಾವನಿಂದ ಬಾವನ ಕೊಲೆ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕಾಗಿ ಗಂಡ-ಹೆಂಡತಿ ಮಧ್ಯೆ ವೈಮನಸ್ಸು ಉಂಟಾಗಿ ಹೆಂಡತಿಯ ಅಣ್ಣ ಬಾವನನ್ನು ಕೊಲೆ ಮಾಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ.

Ad Widget . Ad Widget . Ad Widget .

ಮೃತರನ್ನು ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಹಾಗೂ ಆರೋಪಿಯನ್ನು ಮಣಿನಾಲ್ಕೂರು ಗ್ರಾಮದ ಅಶೋಕ್ ಯಾನೆ ಚಂದಪ್ಪ ಪೂಜಾರಿ (45) ಎಂದು ಗುರುತಿಸಲಾಗಿದೆ.

ಕೇಶವ ಪೂಜಾರಿ ಮಂಗಳೂರಿನ ಹೊಟೇಲ್‌ನಲ್ಲಿ ಅಡಿಗೆ ಕೆಲಸ ಮಾಡುತ್ತಿದ್ದು, ಕಳೆದ ಜ.31ರಂದು ಮನೆಗೆ ಬಂದ ಅವರು ಸಂಬಳದ ಹಣವನ್ನು ಪತ್ನಿ ಪ್ರೇಮಾ ಅವರಲ್ಲಿ ನೀಡಿದ್ದಾರೆ. ಬಳಿಕ ನೂರು ರೂಪಾಯಿ ಕೇಳಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ.

ಈ ವಿಚಾರವಾಗಿ ಪ್ರೇಮಾ ಅವರು ತನ್ನ ಅಣ್ಣ ಚಂದಪ್ಪ ಪೂಜಾರಿಗೆ ತಿಳಿಸಿದ್ದು, ವಿಷಯ ತಿಳಿದ ಕೂಡಲೆ ಮನೆಗೆ ಬಂದ ಅವರು ಕೇಶವ ಪೂಜಾರಿ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಗಂಭೀರ ಗಾಯಗೊಂಡಿದ್ದ ಕೇಶವ ಪೂಜಾರಿಗೆ ವಿಪರೀತ ಎದೆನೋವು ಕಾಣಿಸಿಕೊಂಡ ಹಿನ್ನಲೆ ಅವರ ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಪಡೆದ ಬಳಿಕ ಈ ಕುರಿತಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮತ್ತೆ ಪುನಃ ಕೇಶವ ಪೂಜಾರಿ ಅವರಿಗೆ ಫೆ.8ರಂದು ತೀವ್ರ ಅನಾರೋಗ್ಯ ಕಾಣಿಸಿಕೊಂಡಿದ್ದು. ಮನೆ ಮಂದಿ ಅವರನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ಘಟನೆ ಕುರಿತು ನೆರೆ ಹೊರೆಯವರು ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಶಿವಕುಮಾರ್ ಪುಂಜಾಲಕಟ್ಟೆ ಪೊಲೀಸರಿಗೆ ಮಾಹಿತಿ ನೀಡಿ ಮರಣೋತ್ತರ ಪರೀಕ್ಷೆ ಮಾಡಿಸಲು ಸೂಚಿಸಿದ್ದು. ಅದರಂತೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿಸಿದಾಗ ಹಲ್ಲೆಯಿಂದ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂಬುವುದು ತಿಳಿದುಬಂದಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸಿಐ ಶಿವಕುಮಾರ್ ಮತ್ತು ತಂಡ ಆರೋಪಿಯನ್ನು ಫೆ.21ರಂದು ಮಂಗಳೂರಿನ ಬಜಪೆ ವ್ಯಾಪ್ತಿಯ ಹೊಟೇಲ್‌ನಲ್ಲಿ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Comment

Your email address will not be published. Required fields are marked *