ಮಂಗಳೂರು: ಎಸ್ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪಿಎಸ್ಐ ಕೊರೋನಾಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ತುಂಬು ಗರ್ಭಿಣಿ ಮಹಿಳಾ ಪಿಎಸ್ಐ ಕೋವಿಡ್ ಗೆ ಬಲಿಯಾದ ಘಟನೆ ನಡೆದಿದೆ.

Ad Widget ... ..

ಕಳೆದ 5 ತಿಂಗಳ ಹಿಂದೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದ ಶ್ಯಾಮಿಲಿ (24 ವ) ಮೃತಪಟ್ಟ ಮಹಿಳೆ. ಶ್ಯಾಮಿಲಿಯವರು ಹೆರಿಗೆ ರಜೆ ನಿಮಿತ್ತ ತವರಿಗೆ ತೆರಳಿದ್ದರು. ಕಳೆದೆರಡು ವಾರಗಳ ಹಿಂದೆ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ನಂತರ ಕೋಲಾರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Ad Widget

ಅವರ ನಿಧನಕ್ಕೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *