ಸುಳ್ಯ: ವಾಕಿಂಗ್ ತೆರಳುತ್ತಿದ್ದಾತನಿಗೆ ವಾಹನ ಢಿಕ್ಕಿ| ಗಂಭೀರ ಗಾಯಗೊಂಡಾತ ಆಸ್ಪತ್ರೆಯಲ್ಲಿ ಸಾವು|

ಸಮಗ್ರ ನ್ಯೂಸ್: ಮುಂಜಾನೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಸಂಪಾಜೆಯಲ್ಲಿ ನಡೆದಿದೆ.ಮೃತಪಟ್ಟವರನ್ನು ಸರೋಜ್ ಕುಮಾರ್ ಎಂದು ಗುರುತಿಸಲಾಗಿದೆ.

Ad Widget ... ..

ಸಂಪಾಜೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಕಿಂಗ್ ಹೋಗುತ್ತಿದ್ದ ಸರೋಜ್ ಕುಮಾರ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು.

Ad Widget

ಕಲ್ಲುಗುಂಡಿಯಲ್ಲಿ ಯಕ್ಷಗಾನ ಮುಗಿಸಿ ದಾರಿಯಲ್ಲಿ ಹೋಗುತ್ತಿದ್ದ ಕೆಲವರು ರಕ್ತದ ಮಡವಿನಲ್ಲಿ ಬಿದ್ದ ಸರೋಜ ಕುಮಾರ್ ನೋಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *