ಮತ್ತೆ ತೈಲ‌ಬೆಲೆ ಏರಿಕೆ ಬರೆ| ಪ್ರತೀ ಲೀಟರ್ ಗೆ 9 ರೂ‌ ಏರಿಕೆ ಸಾಧ್ಯತೆ

Ad Widget ... ..

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಏರಿಕೆಯಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 110 ಡಾಲರ್‌ ತಲುಪಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ.

Ad Widget

ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಚ್ಚಾ ತೈಲದ ದರ ಈ ಪ್ರಮಾಣಕ್ಕೆ ಮುಟ್ಟಿದೆ. ಇದಕ್ಕೆ ಅನುಗುಣವಾಗಿ ಇಲ್ಲಿಯೂ ದರ ಏರಿಕೆ ಮಾಡಲಾಗುತ್ತಿತ್ತು. ಆದರೆ, ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಇರುವುದರಿಂದ ತೈಲ ಕಂಪನಿಗಳು ಬೆಲೆ ಏರಿಕೆಯನ್ನು ತಡೆಹಿಡಿದಿವೆ. ಆದರೆ, ಇನ್ನು ನಾಲ್ಕೈದು ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಭಾರೀ ಪ್ರಮಾಣದಲ್ಲಿಯೇ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಮಾ.7ಕ್ಕೆ ಉತ್ತರ ಪ್ರದೇಶದ ಕೊನೆಯ ಹಂತದ ಚುನಾವಣೆ ನಡೆಯಲಿದೆ. ಮಾ.10ಕ್ಕೆ ಫ‌ಲಿತಾಂಶ ಪ್ರಕಟವಾಗಲಿದೆ. ಆದರೂ, ತೈಲ ಕಂಪನಿಗಳು ಮಾ.7ರ ನಂತರ ದರ ಏರಿಕೆ ಮಾಡಬಹುದು ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. 2014ರ ಆಗಸ್ಟ್‌ನಲ್ಲಿ ಪ್ರತಿ ಬ್ಯಾರೆಲ್‌ಗೆ 102 ಡಾಲರ್‌ ತಲುಪಿತ್ತು. ಇದನ್ನು ಬಿಟ್ಟರೆ ಈಗಲೇ ಪ್ರತಿ ಬ್ಯಾರೆಲ್‌ ಕಚ್ಚಾ ತೈಲದ ದರ 110 ಡಾಲರ್‌ಗೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ ( ಐಒ ಸಿ), ಭಾರತ್‌ ಪೆಟ್ರೋಲಿಯಂ ಕಾರ್ಪೊರೇಶನ್‌ (ಬಿಪಿಸಿಎಲ್‌) ಮತ್ತು ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಶನ್‌ ಲಿಮಿಟೆಡ್‌ (ಎಚ್‌ಪಿಸಿಎಲ್‌)ಗಳಿಗೆ ಪ್ರತಿ ಲೀ. ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ 5.7 ರೂ. ನಷ್ಟವಾಗುತ್ತಿದೆ. ಈಗಿರುವ ಕಚ್ಚಾ ತೈಲದ ದರವನ್ನು ಮುಂದಿಟ್ಟುಕೊಂಡರೆ, ನಷ್ಟದ ಪ್ರಮಾಣವನ್ನು ಕಡಿಮೆ ಮಾಡಬೇಕಾದರೆ ಪ್ರತಿ ಲೀ.ಗೆ 9 ರೂ. ಅಥವಾ ಶೇ.10ರಷ್ಟು ದರ ಹೆಚ್ಚಿಸಬೇಕಾಗುತ್ತದೆ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *