ಸಮಗ್ರ ನ್ಯೂಸ್: 1991ರಲ್ಲಿ ಆಗಿನ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಏಳು ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ಸುಮಾರು 32 ವರ್ಷಗಳಿಂದ ಪೆರಾರಿವಾಲನ್ ಜೈಲಿನಲ್ಲಿರುವುದನ್ನು ಗಮನಿಸಿ ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಬಿಆರ್ ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ ಅವರಿಗೆ ಜಾಮೀನು ನೀಡಿದೆ.
ಅರ್ಜಿದಾರರು 30 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದಾರೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು, ಕೇಂದ್ರದ ತೀವ್ರ ವಿರೋಧದ ನಡುವೆಯೂ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಲು ಅರ್ಹರು ಎಂದು ನಾವು ಪರಿಗಣಿಸುತ್ತೇವೆ’ ಎಂದು ಪೀಠವು ಆದೇಶದಲ್ಲಿ ಉಲ್ಲೇಖಿಸಿದೆ. ವಿಚಾರಣಾ ನ್ಯಾಯಾಲಯದ ಷರತ್ತುಗಳ ತೃಪ್ತಿಗೆ ಜಾಮೀನು ಒಳಪಟ್ಟಿರುತ್ತದೆ ಎಂದು ಪೀಠ ಹೇಳಿದೆ. ಅಲ್ಲದೆ, ಅರ್ಜಿದಾರರು ಪ್ರತಿ ತಿಂಗಳ ಮೊದಲ ವಾರದಲ್ಲಿ ಜೋಲಾರ್ಪೆಟ್ಟೈನಲ್ಲಿರುವ ಸ್ಥಳೀಯ ಪೊಲೀಸರಿಗೆ ವರದಿ ಮಾಡಬೇಕು ಅಂತ ತಿಳಿಸಿದೆ.