ಸಮಗ್ರ ನ್ಯೂಸ್: ನಗರದ ಹಲವೆಡೆ ಬೈಕ್ ವ್ಹೀಲಿಂಗ್ ನಡೆಸಿದ್ದ 8 ಮಂದಿಯನ್ನ ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋಗಳ ಹಿನ್ನೆಲೆಯಲ್ಲಿ ಮಂಗಳೂರು ನಗರದ ಪೊಲೀಸರು ಕಾರ್ಯಾಚರಣೆಗಿಳಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು ಡಿಸಿಪಿ ದಿನೇಶ್ ಕುಮಾರ್ ನೇತೃತ್ವದ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಒಟ್ಟು ಐದು ಪ್ರಕರಣಗಳನ್ನ ದಾಖಲಿಸಿ ಎಂಟು ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನ ಇಲ್ಯಾಸ್, ಸುಹೈಲ್, ಅಬೂಬಕ್ಕರ್ ಸಿದ್ದಿಕ್, ಸಫ್ವಾನ್, ಶರೀಫ್, ತೌಸಿಫ್, ಅನೀಝ್, ಕಿಶನ್ ಶೆಟ್ಟಿ ಎಂದು ಗುರುತಿಸಲಾಗಿದೆ.
ತೊಕ್ಕೊಟ್ಟು ಫ್ಲೈ ಓವರ್, ಉಳ್ಳಾಲ, ಅಡ್ಯಾರ್, ವಾಮಂಜೂರು ಭಾಗದಲ್ಲಿ ಬಂಧಿತರು ವ್ಹೀಲಿಂಗ್ ಮಾಡುತ್ತಿದ್ದರು. ಬಂಧಿತರಿಂದ ವ್ಹೀಲಿಂಗ್ ಮಾಡಲು ಬಳಸಿದ ಐದು ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಯುವಕರು ರಸ್ತೆಯಲ್ಲಿ ವ್ಹೀಲಿಂಗ್ ಮತ್ತು ಅಪಾಯಕಾರಿ ಸ್ಟಂಟ್ ಮಾಡುತ್ತಿದ್ದರು. ವ್ಹೀಲಿಂಗ್ ಮಾಡಿದ ವಿಡಿಯೋಗಳನ್ನ ತಾವೇ ಸೋಶಿಯಲ್ ಮೀಡಿಯಾಗಳಲ್ಲಿ ಹಾಕಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.