Ad Widget .

ಕುಮಾರಸ್ವಾಮಿ ಹೊಟೇಲ್ ನಲ್ಲಿ ರಾಸಲೀಲೆ ಆಡ್ತಾ ಇದ್ರು! ; ಸಂಚಲನ ಮೂಡಿಸಿದ ಯೋಗೀಶ್ವರ್ ಹೇಳಿಕೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಿರುವ ಎಂಎಲ್​ಸಿ ಸಿ.ಪಿ.ಯೋಗೇಶ್ವರ್​, ಇದೀಗ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

Ad Widget . Ad Widget .

ಕುಮಾರಸ್ವಾಮಿ 14 ತಿಂಗಳು ಸಿಎಂ ಆಗಿದ್ದ ವೇಳೆ ರಾಸಲೀಲೆ ಆಡಿಕೊಂಡಿದ್ದರು. ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ… ಎಂದು ಯೋಗೇಶ್ವರ್​ ಹೇಳುವ ಮೂಲಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

Ad Widget . Ad Widget .

ಸೋಮವಾರ ರಾಮನಗರದ ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯೋಗೇಶ್ವರ್​, ‘ನನ್ನಿಂದ ಯಾಕಪ್ಪ ಎಚ್​ಡಿಕೆ ಆಣಿಮುತ್ತುಗಳನ್ನು ಕೇಳ್ತೀರಾ? ನೇರಾ-ನೇರಾ ನನ್ನ ಮುಂದೆ ಕೂರಿಸಿ. ವೈಯಕ್ತಿಕ ಹಾಗೂ ಸಾರ್ವಜನಿಕ ವಿಚಾರಗಳನ್ನು ಬಹಿರಂಗವಾಗಿ ಮಾತಾಡೋಣ. 14 ತಿಂಗಳು‌ ಸಿಎಂ ಆಗಿದ್ದ ವೇಳೆ ಚನ್ನಪಟ್ಟಣಕ್ಕೆ ಎಚ್​ಡಿಕೆ ಬರ್ತಿರಲಿಲ್ಲ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ರಾಸಲೀಲೆ ಆಡಿಕೊಂಡಿದ್ರು. ಇದೀಗ ಚನ್ನಪಟ್ಟಣ ತಾಲೂಕಿಗೆ ಬಂದು ಜನರ ಮುಂದೆ ಕಣ್ಣೀರಿಟ್ಟು ನಾಟಕ ಮಾಡ್ತಿದ್ದಾರೆ. ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನು ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ. ಎಚ್​ಡಿಕೆ ಬಹಿರಂಗ ಚರ್ಚೆಗೆ ಬರಲಿ, ನಾನೂ ಸಿದ್ಧನಿದ್ದೇನೆ. ನನ್ನ ಬಗ್ಗೆ ಏಕವಚನದಲ್ಲಿ ಮಾತಾಡಿದ್ರೆ, ನಾನೂ ಕೂಡ ಏಕವಚನದಲ್ಲೇ ಮಾತಾಡ್ತೀನಿ ಎಂದು ಕಿಡಿಕಾರಿದ್ದಾರೆ.

Leave a Comment

Your email address will not be published. Required fields are marked *