ಹಿಜಾಬ್ ತೀರ್ಪು ಹಿನ್ನಲೆ| ಇಂದು ರಾಜ್ಯದ ಹಲವೆಡೆ ಶಾಲಾ ಕಾಲೇಜಿಗೆ ರಜೆ; ತೀವ್ರ ಕಟ್ಟೆಚ್ಚರ

ಸಮಗ್ರ ನ್ಯೂಸ್: ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ಹೈಕೋರ್ಟ್ ಇಂದು ತೀರ್ಪು ನೀಡಲಿರುವ ಹಿನ್ನೆಲೆ ಇಂದು ರಾಜ್ಯದ ಹಲವು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರು, ಉಡುಪಿ, ಶಿವಮೊಗ್ಗ, ಕಲಬುರಗಿ ಜಿಲ್ಲೆಯಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿದ್ದು, 144 ಸೆಕ್ಷನ್ ಜಾರಿಗೊಳಿಸಲಾಗಿದೆ.

Ad Widget ... ..

ಇಂದು ಕಲಬುರಗಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ `144 ಸೆಕ್ಷನ್ ಜಾರಿಗೊಳಿಸಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿದ್ದಾರೆ. .ಶಾಲಾ ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ ಆಯಾ ಕಾಲೇಜಿನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಉಡುಪಿ , ಮಂಗಳೂರು ಜಿಲ್ಲೆಯಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶಾಲಾ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Ad Widget

ಹಿಜಾಬ್ ತೀರ್ಪಿನ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿದ್ದಾರೆ. ಶಾಲಾ ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ ಆಯಾ ಕಾಲೇಜಿನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.

Leave a Comment

Your email address will not be published. Required fields are marked *